ವಿಧಾನಸಭೆ ಉಪಚುನಾವಣೆಯಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಬಿಗ್ ಶಾಕ್ ಎದುರಾಗಿದ್ದು, ಇಬ್ಬರಿಗೂ ಭಾರಿ ಹಿನ್ನಡೆಯಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹಿನ್ನಡೆ ಸಾಧಿಸಿದರೆ ಇತ್ತ ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹಿನ್ನಡೆ ಸಾಧಿಸಿದ್ದಾರೆ.

ಈ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಶಿಗ್ಗಾಂವಿ 10 ನೇ ಸುತ್ತು ಮುಕ್ತಾಯವಾಗಿದ್ದು, ಭರತ್ ಬೊಮ್ಮಾಯಿ 51,790 ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾಸೀರ ಅಹಮದ್ ಪಠಾಣ್ 58,269 ಮತ ಗಳಿಸಿದ್ದಾರೆ. ಚನ್ನಪಟ್ಟಣದಲ್ಲಿ ಯೋಗೇಶ್ವರ್ 17,849 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!