
ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದು, ಚುನಾವಣಾ ಆಯೋಗದಿಂದಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ 9000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಈ ಹಿನ್ನೆಲೆ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.






