ಪುತ್ತೂರು: ಪಟ್ಟೆ ವಿದ್ಯಾಸಂಸ್ಥೆಯಲ್ಲಿ ನಡೆದ ಸವಣೂರು ವಲಯ ಮಟ್ಟದ ಕ್ರೀಡಾಕೂಟದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ, ಮುಂಡೂರು ಸರಕಾರಿ ಶಾಲೆಯ ಏಳನೇಯ ತರಗತಿಯ ವಿದ್ಯಾರ್ಥಿನಿ ತಫಾ ಅವರು 100 ಮೀಟರ್, 200 ಮೀಟರ್ ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಲ್ಲದೆ ಉದ್ದ ಜಿಗಿತದಲ್ಲಿ ಶಾಲಾ ವಿದ್ಯಾರ್ಥಿನಿ ಲತಾಶ್ರೀ ಅವರು ತೃತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಅಬ್ದುಲ್ ರಿಯಾಜ್ ಮತ್ತು ಅತಿಕಾ ರವರ ಮಗಳು ಹಾಗೂ ಶಾಲಾ ಶಿಕ್ಷಕ ವೃಂದದವರ ಸಹಕಾರದೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಬಿ ವನಿತಾ ತರಬೇತಿ ನೀಡಿರುತ್ತಾರೆ ಎಂದು ಶಾಲಾ ಮುಖ್ಯ ಗುರು ವಿಜಯ ಪಿ ತಿಳಿಸಿದ್ದಾರೆ.














