
ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಮಾತನಾಡಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಾನು ಈಗ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಯಿಂದ ಬಂದ ನಂತರ ನಾನು ಮಾತನಾಡುತ್ತೇನೆ. ನಿಮ್ಮೆಲ್ಲರನ್ನೂ ಕರೆಸಿ ಚುನಾವಣೆಗೆ ಸಂಬಂಧಪಟ್ಟಂತೆ ಮಾತನಾಡುತ್ತೇನೆ. ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ ಎಂದರು.






