ರಜೆಯ ಮೇಲೆ ಬಂದಿದ್ದ ಯೋಧನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

ನರೇಶ್ ಯಲ್ಲಪ್ಪ ಆಗಸರ (28) ಮೃತ ದುರ್ದೈವಿ. 20 ದಿನಗಳ ಹಿಂದೆ ನರೇಶ್ ರಜೆ ಮೇಲೆ ಊರಿಗೆ ಬಂದಿದ್ದರು.

ನಿನ್ನೆ ಕೆಲಸಕ್ಕೆ ವಾಪಾಸ್ ಹೋಗುವುದಾಗಿ ಹೇಳಿ ಹೊರಟವರು ಕಿತ್ತೂರು ತಾಲೂಕಿನ ಪರಸಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯೋಧನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಯೋಧನ ಮೃತದೇಹಕ್ಕಾಗಿ ಕೆರೆಯಲ್ಲಿ ಶೋಧಕಾರ್ಯ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್ ಐ ಪ್ರವೀಣ ಗಂಗೋಳ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!