ಚಿಕ್ಕಾಬಳ್ಳಾಪುರದ ಕೊಳಗಾಮೆದಲ್ಲಿ ವೃದ್ಧ ದಂಪತಿಯ ಜೋಡಿ ಮರ್ಡರ್ ಕೇಸ್ ತನಿಖೆ ಚುರುಕುಗೊಂಡಿದ್ದು ,ಅಜ್ಜ-ಅಜ್ಜಿಯನ್ನ ಮೊಮ್ಮಗನೆ ಕೊಲೆ ಮಾಡಿರುವ ಮಾಹಿತಿ ಲಭ್ಯವಾಗಿದೆ.ತನಗಿರುವ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ.
ಇನ್ನೂ ಅತ್ಯಾಚಾರಕ್ಕೆ ಯತ್ನಿಸುವ ಮುನ್ನವೇ ಆರೋಪಿ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.
ನ.21 ರಂದು ಕೊಳಗಾಮೆ ಗ್ರಾಮದಲ್ಲಿ ಡಬಲ್ ಮರ್ಡರ್ ನಡೆದಿತ್ತು. ಕರಿಬಸವಯ್ಯ (65) ಅವರ ಪತ್ನಿ ಲಲೀತಮ್ಮ (60) ಎಂಬವರ ಕೊಲೆಯಾಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ
ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅವನಿಗೆ ಮಹಿಳೆಯರ ಬಳಿ ಹೋಗುವ ಚಟ ಬೆಳಸಿಕೊಂಡಿದ್ದನು. ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಆತನ ಸ್ನೇಹಿತರು, ನೀನು ಮಹಿಳೆಯರ ಬಳಿ ಹೋದಾಗ ಕಾಂಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ ಎಂದು ಹೇಳಿದ್ದರಂತೆ.
ಅದಕ್ಕೆ ಬೆಂಗಳೂರಿನಲ್ಲಿ ಯಾರು ಒಪ್ಪದ ಕಾರಣ ಅಜ್ಜ-ಅಜ್ಜಿಯ ಮನೆಗೆ ಬಂದಿದ್ದನು. ಅಜ್ಜಿಯ ಮೇಲೆ ಅತ್ಯಾಚಾರ ಮಾಡುವುದು ಆತನ ಮೂಲ ಉದ್ದೇಶವಾಗಿತ್ತು. ಹಾಗಾಗಿ, ಮೊದಲಿಗೆ ಅಜ್ಜನನ್ನ ಕಲ್ಲಿನಿಂದ ಚಚ್ಚಿ, ಕೊಲೆ ಮಾಡಿ ನಂತರ ಅಜ್ಜಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಜ್ಜಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದಿದ್ದರಿಂದ ಆಕೆಯು ಸಾವನ್ನಪ್ಪಿದ್ದಳು ಎಂದು ತಿಳಿದು ಬಂದಿದೆ.