ಬೆಳ್ತಂಗಡಿ : ನ 26: ವಾರದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜ್ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ.
ಮಿತ್ತಬಾಗಿಲು ಸಮೀಪದ ನೆಲ್ಲಿಗುಡ್ಡೆ ನಿವಾಸಿ ರಾಜೇಶ್ ಆರುಣಾ ದಂಪತಿಗಳ ಪುತ್ರಿ ಹೃಶ್ಚಿ (17ವ) ಮೃತಪಟ್ಟ ಯುವತಿ .ಈಕೆ ಸ್ಥಳೀಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು.
ಈಕೆ ನ 20 ರಂದು ಯಾವುದೋ ಕಾರಣಕ್ಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಗೊಂಡಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತಿತ್ತು.