ಮಹದೇಶ್ವರ ಬೆಟ್ಟಕ್ಕೆ ತರಳುವ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ತಾಳಬೆಟ್ಟದ ಬಳಿ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ತಾಳಬೆಟ್ಟ ನಡುವೆ ಈ ಅಪಘಾತ ಸಂಭವಿಸಿದೆ. ಕಾರು ತಲೆ ಕೆಳಗಾಗಿ ಉರುಳಿದ ಪರಿಣಾಮ ಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದ ಮೈಸೂರು ನಗರ ಸಂಚಾರ ಪೊಲೀಸ್ ಪೇದೆ ವಿಜಯ್ ಕುಮಾರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!