
ಬೆಂಗಳೂರು :ವಕ್ಫ್ ಬೋರ್ಡ್ ವಿರುದ್ಧದ ಹೋರಾಟದ ವೇಳೆ ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಚಂದ್ರಶೇಖರ ಸ್ವಾಮೀಜಿ ಈಗ ತಮ್ಮ ಹೇಳಿಕೆಯಿಂದ ಯು ಟರ್ನ್ ಹೊಡೆದಿದ್ದಾರೆ.ಈ ಬಗ್ಗೆ ಇಂದು ಮಾತನಾಡಿದ ಸ್ವಾಮೀಜಿ ನಮ್ಮ ಭಾರತ ಸರ್ವಧರ್ಮಗಳ ದೇಶ.ನಮ್ಮ ಮಠಕ್ಕೂ ಮುಸ್ಲಿಂ ಭಕ್ತರಿದ್ದಾರೆ. ಅಷ್ಟೇ ಯಾಕೆ, ನಾನೂ ಕೂಡ ಮುಸ್ಲಿಂ ಸಮುದಾಯದ ಮದುವೆಗಳಿಗೆ ಹೋಗ್ತಿನಿ ಎಂದು ಹೇಳುವ ಮೂಲಕ ಸಾಫ್ಟ್ ಕಾರ್ನರ್ ತೋರಿದ್ದಾರೆ.
ಚಂದ್ರಶೇಖರ ಸ್ವಾಮೀಜಿ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ್ದ ದೂರಿನ ಅನ್ವಯ ಉಪ್ಪಾರಪೇಟೆ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿದ್ದು, ಡಿಸೆಂಬರ್ 2 ರಂದು ಬೆಳಗ್ಗೆ 11 ಗಂಟೆಗೆ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ಜಾರಿಗೊಳಿಸಿದ್ದಾರೆ.
ಆದ್ರೆ ಈ ಬಗ್ಗೆ ಮಾತನಾಡಿದ ಸ್ವಾಮೀಜಿ, ನೋಟಿಸ್ ನೀಡಿರೋದು ಗೊತ್ತಿಲ್ಲ, ನನ್ನ ಆರೋಗ್ಯ ಸರಿಯಿಲ್ಲ, ನಾನು ವಿಶ್ರಾಂತಿಯಲ್ಲಿದ್ದೆ. ಬಹುಶಃ ವಿಚಾರಣೆಗೆ ಹೋಗಲು ಆಗೋಲ್ಲ, ಅವ್ರೇ ಇಲ್ಲೇ ಬಂದ್ರೇ ನನ್ನ ಹೇಳಿಕೆಗೆ ಸ್ಪಷ್ಟನೆ ನೀಡ್ತೇನೆ ಅಂತ ಹೇಳಿದ್ದಾರೆ . ನನ್ನನ್ನು ಅರೆಸ್ಟ್ ಮಾಡೋದಿದ್ರೆ ಮಾಡ್ಲಿ, ಎಲ್ಲಾ ದೇವರ ಮೇಲೆ ಭಾರ ಹಾಕಿದ್ದೀನಿ ಎಂದು ಹೇಳಿದ್ದಾರೆ.






