ಮಕೂರು : ನಾಳೆ ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು, ಬಹುಕೋಟಿ ಕಾಮಗಾರಿಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಅಲ್ಲದೆ 1.4 ಲಕ್ಷದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ಈ ಒಂದು ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆದರೆ ಇದೆ ವೇಳೆ ಮಾಜಿ ಶಾಸಕ ಗೌರಿ ಶಂಕರ್ ಅವರು ಬಿಜೆಪಿ ಶಾಸಕ ಸುರೇಶ್ ಗೌಡ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಇದೀಗ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ರೆ 1ಲಕ್ಷ ಬಹುಮಾನ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಸುರೇಶ ಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ.
ಗ್ರಾಮ ಪಂಚಾಯಿತಿಗಳಿಗೆ ಬಸ್ ಕಳಿಸುತ್ತೇನೆ ಎಲ್ಲರೂ ಹೋರಾಟ ಮಾಡಬೇಕು. ಸಿಎಂ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ.ಅಧ್ಯಕ್ಷರು, ಸದಸ್ಯರು ಕಪ್ಪು ಬಾವುಟ ತೋರಿಸಬೇಕು. ಅಲ್ಲದೇ ಸಮಾವೇಶದಲ್ಲಿ ಧಿಕ್ಕಾರ ಕೂಗಿದವರಿಗೆ 1 ಲಕ್ಷ ಬಹುಮಾನ ನೀಡುತ್ತೇನೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಅವರು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎನ್ನಲಾದ ಆಡಿಯೋವನ್ನು ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ.