ಎಲ್ಲೋ ಸ್ವಿಚ್ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ! ಇದು, ಯತ್ನಾಳ ಬಂಡಾಯದ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರ ಮಾರ್ಮಿಕ ಹೇಳಿಕೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದಾಗ, ಯಾವ ಗುಂಪಿನಿಂದ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ್ ಹೋರಾಟಕ್ಕೆ ಸಂಬಂಧಿಸಿದಂತೆ ಎಲ್ಲೋ ಸ್ವಿಚ್ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ ಎಂದರು.
ಸ್ವಿಚ್ ಇರುವುದು ದೆಹಲಿಯಲ್ಲಿಯೋ ಅಥವಾ ಬೆಂಗಳೂರಿನಲ್ಲಿಯೋ ಎಂದು ಕೇಳಿದ್ದಕ್ಕೆ ಕೆಲಕಾಲ ಮೌನವಾದರು. ಅದನ್ನು ವಿವರವಾಗಿ ಹೇಳಲಿಲ್ಲ ಮತ್ತು ಯಾರು ಸ್ವಿಚ್ ಎನ್ನುವ ಪ್ರಶ್ನೆಗೂ ಉತ್ತರಿ ಸಲಿಲ್ಲ. ಆದರೆ, ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿಯೂ ಡಿ. 6ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ವಿಜಯೇಂದ್ರ ನೇತೃತ್ವ ವಹಿಸಲಿದ್ದಾರೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳ ಅವರ ಕುರಿತು ಕ್ರಮ ವಹಿಸಲು ರಾಷ್ಟ್ರೀಯ ನಾಯಕರು ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬ್ಯೂಸಿ ಇದ್ದರು. ಇನ್ಮುಂದೆ ರಾಜ್ಯದ ಕುರಿತು ಗಮನ ಹರಿಸಲಿದ್ದಾರೆ. ಯತ್ನಾಳ ಅವರ ವಿಷಯವನ್ನು ರಾಷ್ಟ್ರೀಯ ನಾಯಕರು ನೋಡಿಕೊಳ್ಳುತ್ತಾರೆ ಎಂದರು.