
ಮಂಗಳೂರು :ಫೆಂಗಲ್ ಚಂಡಮಾರುತ ಹಿನ್ನಲೆಯಲ್ಲಿ ಕೇಂದ್ರ ಹವಾಮಾನ ಇಲಾಖೆಯು ನೀಡಿದ ಮಾಹಿತಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಗಳಿದ್ದು, ಡಿ.3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಈ ನಿಟ್ಟಿನಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮು ಘೋಷಿಸಿದ್ದಾರೆ. ಮುಗಿಲನ್ ರಜೆ
ಪ್ರಾಥಮಿಕ ಪ್ರೌಡ ಮತ್ತು ಪಿಯುಸಿ, ಅಂಗನವಾಡಿ, ಟ್ಯೂಷನ್ ಸೆಂಟರ್ ಗಳಿಗೆ ರಜೆ ಅನ್ವಯವಾಗಲಿದೆಯೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಂಗಾಳ ಕೊಲ್ಲಿಯ ಆಳ ಸಮುದ್ರದಲ್ಲಿ ರೂಪುಗೊಂಡ ಫೆಂಗಲ್ ಚಂಡಮಾರುತದಿಂದಾಗಿ ವ್ಯಾಪಕ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಡಿ.2 ರಂದು ಮಧ್ಯಾಹ್ನದ ಬಳಿಕ ಮಳೆ ಆರಂಭವಾಗಿದ್ದು. ಡಿ.3 ರಂದು ಇನ್ನಷ್ಟು ಪ್ರಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.






