ಕ ನ್ನಡದ ಸಿನಿಮಾ ಮತ್ತು ಸೀರಿಯಲ್ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದ ನಟಿ ಶೋಭಿತಾ ಶಿವಣ್ಣ ಡಿ.1ರಂದು ಹೈದರಾಬಾದ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಸಾವಿಗೆ ಕಾರಣ ಏನು ಎಂಬದನ್ನು ತಿಳಿಸಿದ್ದಾರೆ. ಶೋಭಿತಾ ಶಿವಣ್ಣ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗಿದ್ದು, ಆತ್ಮಹತ್ಯೆಯಿಂದಲೇ ಶೋಭಿತಾ ನಿಧರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಮದುವೆ ಆದ ಬಳಿಕ ಶೋಭಿತಾ ಹೈದರಾಬಾದ್ನಲ್ಲಿ ಪತಿಯ ಜೊತೆ ನೆಲೆಸಿದ್ದರು. ಅಪಾರ್ಟ್ಮೆಂಟ್ನಲ್ಲಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಯಾರಾದರೂ ನಟಿಯನ್ನು ಹತ್ಯೆ ಮಾಡಿರಬಹುದೇ ಎಂಬ ಪ್ರಶ್ನೆ ಕೂಡ ಉದ್ಭವ ಆಗಿತ್ತು. ಆದರೆ ಶೋಭಿತಾ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಾಣಿಸಿಲ್ಲ. ಹಾಗಾಗಿ ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂಬುದು ಖಚಿತವಾಗಿದೆ.

ಶೋಭಿತಾ ಸಾವಿನ ಬಗ್ಗೆ ಪೊಲೀಸರು ಈಗಾಗಲೇ ತನಿಖೆ ಆರಂಭಿದ್ದಾರೆ. ಶೋಭಿತಾ ಬರೆದಿದ್ದರು ಎನ್ನಲಾದ ಸೂಸೈಡ್ ನೋಟ್ ಕೂಡ ಲಭ್ಯವಾಗಿದೆ. ‘ನೀನು ಸಾಯಬಹುದು ಅಂದ್ರೆ ನೀನು ಸಾಯಬಹುದು’ ಎಂದು ಇದರಲ್ಲಿ ಬರೆಯಲಾಗಿದೆ. ಅಲ್ಲದೇ, ‘ಜೀವನದಲ್ಲಿ ಎಲ್ಲವೂ ಪರ್ಫೆಕ್ಟ್ ಆಗಿದೆ’ ಎಂದು ಸಹ ಬರೆಯಲಾಗಿದ್ದು, ಈ ಸಾಲುಗಳ ಅರ್ಥ ಏನು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ.

ನಟಿಯ ಆತ್ಮಹತ್ಯೆ ಸಂಬಂಧಿಸಿದಂತೆ ನೆರೆಹೊರೆಯವರಿಂದ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಶೋಭಿತಾ ಅವರ ಸಂಸಾರದಲ್ಲಿ ಏನಾದರೂ ಬಿರುಕು ಮೂಡಿತ್ತಾ ಎಂಬುದನ್ನು ಕೂಡ ಪತ್ತೆ ಹಚ್ಚಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!