ಇಷ್ಟ ಪಟ್ಟು ಮದುವೆಯಾದ ನವವಿವಾಹಿತ ಕೇವಲ ಮೂರು ತಿಂಗಳ ಬಳಿಕ ನಿಗೂಢ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬುವವರ ಪುತ್ರ ಪ್ರದೀಪ್‌ (32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಪ್ರದೀಪ್‌ ಮೂರು ತಿಂಗಳ ಹಿಂದಷ್ಟೇ ಪ್ರೀತಿಸಿದ ಹುಡುಗಿಯನ್ನು ಮದುವೆಯಾಗಿದ್ದ. ಆತ ಮಂಗಳೂರಿನ ಹೊಟೆಲ್‌ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದು, ದಂಪತಿ ಅಲ್ಲಿಯೇ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ದಂಪತಿ ಅನ್ಯೋನ್ಯವಾಗಿದ್ದರು ಎನ್ನಲಾದರೂ ಪ್ರದೀಪ್‌ ಬುಧವಾರ ಸಂಜೆ ತಮ್ಮ ಬಾಡಿಗೆ ಮನೆಯ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!