ಸಾ ಮಾನ್ಯವಾಗಿ ನಾವು ಬೈಕ್‌ಗಳನ್ನು ನಾವು ಓಡಾಡುವುದಕ್ಕೆ ಬಳಸುತ್ತೇವೆ. ಹೆಚ್ಚೆಂದರೆ ಬೈಕಿನಲ್ಲಿ ಹೋಗುವಾಗ ನಮ್ಮ ಜೊತೆಗೆ ಕೋಳಿ, ಕುರಿ, ಮೇಕೆಗಳನ್ನು ಹಿಡಿದುಕೊಂಡು ಹೋಗುತ್ತೇವೆ. ಇನ್ನೂ ಕೆಲವೊಬ್ಬರು ಧೈರ್ಯ ಮಾಡಿ ಸಣ್ಣ ಕರುಗಳನ್ನು ಕೂಡ ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಾರೆ.

ಆದರೆ, ಇಲ್ಲಿ ಇಬ್ಬರು ಕಿರಾತಕರು ಸುಮಾರು 8ರಿಂದ 9 ಅಡಿ ಎತ್ತರದ ಬೃಹತ್ ಗಾತ್ರದ ಒಂಟೆಯನ್ನೇ ಬೈಕಿನಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಈ ವಿಡಿಯೋ ಇದಘ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಪ್ರತಿ ವಿಡಿಯೋ ಕೂಡ ಹಿಂದಿನ ವಿಡಿಯೋಗಿಂತ ಒಂದು ಹೆಜ್ಜೆ ಮುಂದೆ ಇರುತ್ತದೆ. ಇದೀಗ ಈ ಸಾಲಿಗೆ ಸೇರ್ಪಡೆಯಾಗಿರುವುದು ಒಂಟೆಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿರುವ ಇಬ್ಬರು ಯುವಕರ ವಿಡಿಯೋ. ಜಿಸ್ಟ್ ನ್ಯೂಸ್ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜನದಟ್ಟಣೆಯ ರಸ್ತೆಯಲ್ಲಿ ಒಂಟೆಯೊಂದಿಗೆ ಪ್ರಯಾಣಿಸುತ್ತಿರುವುದನ್ನು ಕಾಣಬಹುದು. ಆದರೆ, ಈ ವಿಡಿಯೋ ವಿರುದ್ಧ ಸಾಮಾಜಿಕ ಮಾಧ್ಯಮ ಬಳಕೆದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಬೈಕಿನಲ್ಲಿ ಇಬ್ಬರು ವ್ಯಕ್ತಿಗಳು ಒಂಟೆಯನ್ನು ಹೊತ್ತುಕೊಂಡು ಹೋಗುತ್ತಿರುವ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ಆದರೆ, ಈ ವಿಡಿಯೋವನ್ನು ಎಲ್ಲಿ, ಯಾವಾಗ ರೆಕಾರ್ಡ್ ಮಾಡಲಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ಸ್ವತಃ ವಿಡಿಯೋ ಹಂಚಿಕೊಂಡಿರುವ ವ್ಯಕ್ತಿಯೇ ಬರೆದುಕೊಂಡಿದ್ದಾರೆ. ಇನ್ನು ವಿಡಿಯೋದಲ್ಲಿ ಒಬ್ಬ ವ್ಯಕ್ತಿ ಬೈಕ್ ಓಡಿಸುತ್ತಿದ್ದರೆ, ಹಿಂದೆ ಕುಳಿತಿರುವ ವ್ಯಕ್ತಿ ತನ್ನ ಮಡಿಲಿನಲ್ಲಿ ಒಂಟೆಯನ್ನು ಹಿಡಿದಿಟ್ಟುಕೊಂಡಿರುವುದನ್ನು ಕಾಣಬಹುದು. ಇಷ್ಟು ದೊಡ್ಡ ಪ್ರಾಣಿಯನ್ನು ಇಷ್ಟು ಸುಲಭವಾಗಿ ಬೈಕಿನಲ್ಲಿ ಹೇಗೆ ಸಾಗಣೆ ಮಾಡಲು ಸಾಧ್ಯ ಎಂಬುದು ವೀಕ್ಷಕರ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!