ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ (92)ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದರು.

ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-1932) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು.

ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು.

ಅವರು 1999ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004ರಿಂದ 2008 ರವರೆಗೆ ಮಹಾರಾಷ್ಟ್ರದ 19ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!