ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿರುವ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2 ಡಿಸೆಂಬರ್ 11ರಂದು ಬುಧವಾರ ಸಂಜೆ ಉಪ್ಪಿನಂಗಡಿ ಗೆ ತಲುಪಲಿದೆ.
ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ.
ಕೇವಲ ನೆಪ ಮಾತ್ರದ ಮೌಖಿಕ ಹೇಳಿಕೆಗಳನ್ನು ನೀಡಿ ಕಣ್ಣೆರೆಸುವ ತಂತ್ರ ಮಾಡುತ್ತಿದೆ. ಬಿಜೆಪಿಯ ಐಟಿ ಸೆಲ್ ಮತ್ತು ಬಿಜೆಪಿ ಬೆಂಬಲಿತ ಕೆಲವು ಕೋಮುವಾದಿ ಮಾಧ್ಯಮಗಳ ಅಪಪ್ರಚಾರಕ್ಕೆ ಹೆದರಿ ತಕ್ಷಣ U-Turn ಹೊಡೆದು ತನ್ನ ಹೇಳಿಕೆಗಳನ್ನೇ ಅಲ್ಲಗಳೆಯುವುದು ಈ ಸರ್ಕಾರದ ಸಾಮಾನ್ಯ ಚಾಳಿಯಾಗಿಬಿಟ್ಟಿದೆ. ಈ ಅಸಹಾಯಕ U Turn ಚಾಳಿಯನ್ನು ಖಂಡಿಸಿ, ಚಳಿಗಾಲದ ಅಧಿವೇಶನ ನಡೆಯುವ ಸುವರ್ಣಸೌಧ ಬೆಳಗಾವಿಗೆ ಜನಾಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2 ಅನ್ನು ಉಡುಪಿಯಿಂದ ಹಮ್ಮಿಕೊಳ್ಳಲಾಗಿದೆ.
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 2 ದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಜಿಲ್ಲಾ ಮುಖಂಡರು, ಸಾಮಾಜಿಕ ಹೋರಾಟಗಾರರು, ವಿವಿಧ ಸಂಘಟನೆ ಪದಾಧಿಕಾರಿಗಳು, ನಾಯಕರು ಪಾಲ್ಗೊಳ್ಳಲಿದ್ದಾರೆ.
ಬುಧವಾರ ಸಾಯಂಕಾಲ ಪುತ್ತೂರು ತಾಲೂಕು ವ್ಯಾಪ್ತಿಯನ್ನು ಅಂಬೇಡ್ಕರ್ ಜಾಥಾ -2 ಪ್ರವೇಶಿಸಲಿದೆ. ನೆಕ್ಕಿಲಾಡಿ ಯಲ್ಲಿ ಹೋರಾಟಗಾರರಿಗೆ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ತದನಂತರ ನೆಕ್ಕಿಲಾಡಿ ಯಿಂದ ಉಪ್ಪಿನಂಗಡಿ ವರೆಗೆ ಕಾಲ್ನಡಿಗೆ ಜಾಥಾ ಉಪ್ಪಿನಂಗಡಿ ಬಸ್ ನಿಲ್ದಾಣದ ವರೆಗೆ ನಡೆಯಲಿದೆ. ಜಾಥಾ ಉದ್ದೇಶಿಸಿ ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿ ಸಭಾ ಕಾರ್ಯಕ್ರಮ ಕಾರ್ಯಕ್ರಮ ನಡೆಯಲಿದೆ ಎಂದು SDPI ಪುತ್ತೂರು ಕ್ಷೇತ್ರ ಸಮಿತಿ ಕಾರ್ಯದರ್ಶಿ ರಹಿಮಾನ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.