

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಶನಿವಾರ) ಅವರನ್ನು ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
96 ವರ್ಷದ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾದ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.
ಎರಡು ದಿನಗಳ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರರೋಗ ತಜ್ಞ ಡಾ.ವಿನಿತ್ ಸೂರಿ ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
