ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals)ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಡೆದಿದೆ.

ಸ್ಥಳೀಯರಿಂದ ಧರ್ಮದೇಟು

ನಾಯಿಯೊಂದಿಗೆ ಅನೈಸರ್ಗಿಕ ಲೈಂಗಿಕ‌ಕ್ರಿಯೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ಸಾತನೂರು ರಸ್ತೆ ಬಳಿ ನಡೆದಿದೆ. ಬಳ್ಳಾರಿ ಮೂಲದ ಬಸವ ಎಂಬ ವ್ಯಕ್ತಿಯಿಂದ ವಿಕೃತಿ ಮೆರೆಯಲಾಗಿದೆ. ಸದ್ಯ ಬಸವನನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಿರ್ಜನ ಪ್ರದೇಶದಲ್ಲಿ ನಾಯಿ ಕಟ್ಟಿ ಹಾಕಿದ್ದ ಬಸವ, ಬಳಿಕ ಅದರ ಜೊತೆ ಅನೈಸರ್ಗಿಕ ಲೈಂಗಿಕ‌ಕ್ರಿಯೆ ಮಾಡುತ್ತಿದ್ದ. ಇದನ್ನು ಸ್ಥಳೀಯರು ಗಮನಿಸಿದ್ದಾರೆ. ನಾಯಿಯೊಂದಿಗೆ ಸಂಭೋಗ ಮಾಡುವಾಗಲೇ ಸಿಕ್ಕಬಿದ್ದ ಬಸವನಿಗೆ ಸ್ಥಳೀಯರು ಥಳಿಸಿದ್ದಾರೆ.

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಸವನನ್ನು ವಿಚಾರಣೆ ಮಾಡಲಾಗಿದ್ದು, ಪ್ರಕರಣ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

Leave a Reply

Your email address will not be published. Required fields are marked *

Join WhatsApp Group
error: Content is protected !!