![](https://vidyamaana.com/wp-content/uploads/2024/09/image_1.png.jpeg.webp)
ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 26 ವರ್ಷದ ಭಾರತೀಯ ವಿದ್ಯಾರ್ಥಿನಿ ನಾಗಶ್ರೀ ವಂದನಾ ಪರಿಮಳಾ ಮೃತಪಟ್ಟಿದ್ದು ಇತರ ಇಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಅಮೆರಿಕದ ಟೆನ್ನೆಸ್ಸೀ ರಾಜ್ಯದ ಮೆಂಫಿಸ್ ನಗರದಲ್ಲಿ ಶುಕ್ರವಾರ ತಡರಾತ್ರಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಇಬ್ಬರು ಭಾರತೀಯ ವಿದ್ಯಾರ್ಥಿಗಳಾದ ಪವನ್ ಮತ್ತು ನಿಖಿತ್ ಗಾಯಗೊಂಡಿರುವುದಾಗಿ ವರದಿಯಾಗಿದೆ.
![](https://vidyamaana.com/wp-content/uploads/2024/12/screenshot_20241216_062214_dailyhunt7616851028417685664-1024x565.jpg.webp)