ಶ ಬರಿಮಲೆಯ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಫ್ಲೈ ಓವರ್ ನಿಂದ ಜಿಗಿದು ಭಕ್ತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಫ್ಲೈ ಓವರ್ ನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದ ಭಕ್ತ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ.ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ