ಗ್ರೈಂಡರ್’ ಗೆ ಸಿಲುಕಿ 19 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮುಂಬೈನ ವರ್ಲಿಯ ಆದರ್ಶ್ ನಗರದಲ್ಲಿ ನಡೆದಿದೆ.
ಜಾರ್ಖಂಡ್ ಮೂಲದ ಸೂರಜ್ ನಾರಾಯಣ್ ಯಾದವ್ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಚಿನ್ ಕೊಥೇಕರ್ (32) ಒಡೆತನದ ರಸ್ತೆಬದಿಯ ಚೈನೀಸ್ ಫುಡ್ ಸ್ಟಾಲ್ನಲ್ಲಿ ಕೆಲಸ ಮಾಡುತ್ತಿದ್ದರು.
ದಾದರ್ ಪೊಲೀಸರು ಕೊಥೇಕರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಯಾದವ್ ಅವರು ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದಿದ್ದು, ಗ್ರೈಂಡರ್ ಅವರನ್ನು ಒಳಗೆ ಎಳೆದುಕೊಂಡಿದೆ. ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.