ಪುತ್ತೂರು: ಮಹಾಲಿಂಗೇಶ್ವರ ದೇವಳದ ನೂತನ ಸಮಿತಿ ಘೋಷಣೆಯಾಗುತ್ತಿದ್ದಂತೆ ಅರ್ಜಿ ಸಲ್ಲಿಸಿದ್ದ ಸುದೇಶ್ ಕುಮಾರ್ ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಬ್ಲಾಕ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ರವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ತಾನು ಕಳೆದ 35 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತನಾಗಿ ಕೊಂಬೆಟ್ಟು ವಾರ್ಡ್ ನಲ್ಲಿ ದುಡಿಯುತ್ತಿದ್ದು ಪಕ್ಷದ ಎಲ್ಲಾ ಚಟುವಟಿಗಳಲ್ಲಿ ಸಕ್ರಿಯವಾಗಿ ಭಾಗವಹಿಸುತಿದ್ದು ಪಕ್ಷದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದೇನೆ.
ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನಾಮ ನಿರ್ದೇಶನಕ್ಕೆ ಅರ್ಜಿ ಸಲ್ಲಿಸಿದ್ದು ಪ್ರಬಲ ಆಕಾಂಕ್ಷಿಯಾಗಿದ್ದೆ ದೇವಸ್ಥಾನದ ಪ್ರತಿಯೊಂದು ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದೆ ಅದರೂ ನನ್ನನ್ನು ಆಯ್ಕೆ ಮಾಡದ ಕಾರಣ ಮನನೊಂದು ಪಕ್ಷದ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.