ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಡಿ.19ರಂದು ಬೆಳಿಗ್ಗೆ 9ರಿಂದ ಸಂತ ಫಿಲೋಮಿನಾ ಸಿಲ್ವರ್ ಜುಬಿಲಿ ಮೆಮೋರಿಯಲ್ ಹಾಲ್‌ನಲ್ಲಿ ನಡೆಯಲಿದೆ.
ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಾಹಿತಿ, ಅಂಕಣಕಾರ ನಿವೃತ್ತ ಪ್ರಾಧ್ಯಾಪಕ ಡಾ|ನರೇಂದ್ರ ರೈ ದೇರ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಫಾ.ಲಾರೆನ್ಸ್ ಮಸ್ಕರೇನ್ಹಸ್, ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ ಗೌರವ ಉಪಸ್ಥಿತರಿರಲಿದ್ದಾರೆ. ಮಂಗಳೂರು ಕ್ಯಾಥೊಲಿಕ್ ಬೋರ್ಡ್ ಉಪಾಧ್ಯಕ್ಷ ಮೊನ್ಸಿಗ್ಟರ್ ಮ್ಯಾಕ್ಸಿಮ್ ಎಲ್. ನೊರೋನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.