ಮಾಣಿ : ಬೈಕ್ ಮತ್ತು ಟೆಂಪೊ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ಬುಧವಾರ ( ಡಿ 18) ರಾತ್ರಿ ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ನಲ್ಲಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಟಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್ ಸವಾರ.
ಬೈಕ್ ಸವಾರ ಸೂರಿಕುಮೇರ್ ನಲ್ಲಿ ತಾನು ಕೆಲಸ
ಮಾಡುತ್ತಿದ್ದ ಕಂಪೆನಿಯಲ್ಲಿ ಕೆಲಸ ಮುಗಿಸಿ ಸುಳ್ಯದ ತನ್ನ ಮನೆಗೆ ಹೊರಟ್ಟಿದ್ದ ವೇಳೆ ಅಪಘಾತ ನಡೆದಿದೆ. ಸೂರಿಕುಮೇರು ಜಂಕ್ಷನ್ ನಲ್ಲಿ ಬೈಕ್ ಹಾಗೂ ಟೆಂಪೊ ಪರಸ್ಪರ ಢಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಉರುಳಿ ಬಿದ್ದು ಗಂಭೀರ ಗಾಯಗೊಂಡಿದ್ದಾರೆ.
ತಕ್ಷಣ ಗಾಯಾಳುವನ್ನು ಮಾಣಿಯ ಸೋಷಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಮೃತಪಟ್ಟಿದ್ದಾರೆ.














