ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.ಪುತ್ತೂರು ತಾಲ್ಲೂಕಿನ ಪಡ್ನೂರು ಗ್ರಾಮದ ರಾಮನಗರ ನಿವಾಸಿ ಅಬ್ದುಲ್‌ಕುಂಞಿ (66) ಮೃತಪಟ್ಟವರು.

ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಮತ್ತು ಅಬ್ದುಲ್‌ಕುಂಞಿ ಅವರು ಪುತ್ತೂರು ಕಡೆಯಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಗಂಭೀರ ಗಾಯಗೊಂಡ ಅಬ್ದುಲ್‌ಕುಂಞಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಅಬ್ದುಲ್ ಕರೀಮ್ ಎಂಬುವರು ನೀಡಿರುವ ದೂರಿನಂತೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!