ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಆರೋಪದಡಿ ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೂಡಲೇ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಬೇಕೆಂದು ಮಧ್ಯಂತರ ಆದೇಶ ನೀಡಿದೆ.

ಈ ಮೂಲಕ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಸಹಕರಿಸಬೇಕೆಂದು ಸಿ.ಟಿ. ರವಿ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್ ಷರತ್ತು ವಿಧಿಸಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!