
ಪುತ್ತೂರು: ಸಂಸತ್ತಿನಲ್ಲಿ ತಮ್ಮ ಭಾಷಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.
ಇದಕ್ಕೆ ಪೂರಕವಾಗಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ನಗರ ಸಮಿತಿ ವತಿಯಿಂದ ಡಿ.21ರ ಶನಿವಾರದಂದು ಸಾಯಂಕಾಲ 4.15ಕ್ಕೆ ಪ್ರತಿಭಟನೆ ನಡೆಯಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು ಸಂವಿಧಾನ ವಿರೋಧಿಗಳ ವಿರುದ್ಧ ಹೋರಾಡೋಣ, ಸಂವಿಧಾನವನ್ನು ಉಳಿಸೋಣ ಮತ್ತು ಸಂವಿಧಾನ ವಿರೋಧಿ ಸಂಘಿ ಮನಃಸ್ಥಿತಿಯನ್ನು ಸೋಲಿಸೋಣ ಎಂಬ ಧ್ಯೇಯವಾಕ್ಯದೊಂದಿಗೆ ಈ ಪ್ರತಿಭಟನೆ ನಡೆಯಲಿದೆ ಎಂದು ಎಸ್.ಡಿ.ಪಿ.ಐ.ನ ನಗರ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.










