ಮ ಳವಳ್ಳಿ: ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ಶನಿವಾರ ಮಗನ ಸಾವಿನ ಸುದ್ದಿ ಕೇಳಿದ ತಾಯಿಯೂ ಮೃತಪಟ್ಟಿದ್ದಾರೆ.

ಗ್ರಾಮದ ಲೇಟ್‌ ಶಿವರಾಮು ಎಂಬುವರ ಪುತ್ರ ಕೃಷ್ಣಮೂರ್ತಿ (20) ಶುಕ್ರವಾರ ಮಧ್ಯಾಹ್ನ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಪಂಡಿತಹಳ್ಳಿ ಬಳಿ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸಾರ್ವಜನಿಕ ಪಟ್ಟಣದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶನಿವಾರ ಮಧ್ಯಾಹ್ನ ಅಸುನೀಗಿದ್ದು, ಮಗನ ಸಾವಿನ ಸುದ್ದಿ ಕೇಳಿದ ಮಹದೇವಮ್ಮ (48) ಮನೆಯಲ್ಲಿಯೇ ಕುಸಿದು ಬಿದ್ದು ಮೃತಪಟ್ಟರು. ಸಾವಿನಲ್ಲೂ ಒಂದಾದ ತಾಯಿ- ಮಗನನ್ನು ಗ್ರಾಮಸ್ಥರು ಶನಿವಾರ ಸಂಜೆ ಅಕ್ಕಪಕ್ಕದಲ್ಲೇ ಅಂತ್ಯಸಂಸ್ಕಾರ ನಡೆಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!