ಪುತ್ತೂರು : ಶ್ರೀನಿವಾಸ ದೇವರಿಗೆ ಪ್ರಿಯವಾದ ಶ್ರೀನಿವಾಸ ಕಲ್ಯಾಣೋತ್ಸವ ದ್ವಿತೀಯ ಬಾರಿಗೆ ಪುತ್ತೂರ ಒಡೆಯ ಮಹಾಲಿಂಗೇಶ್ವರ ದೇವಸ್ಥಾನ ಎದುರಿನ ದೇವರಮಾರು ಗದ್ದೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಡಿ.28-29 ರಂದು ಜರುಗಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಪೇಟೆಯಲ್ಲಿ ವಿತರಿಸಲಾಯಿತು.
ಉದ್ಯಮಿ ಪದ್ಮನಾಭ ನಾಯ್ಕ್ ಮತ್ತು ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಸುಬ್ರಹ್ಮಣ್ಯ ಬಲ್ಯಾಯ ತೆಂಗಿನಕಾಯಿ ಒಡೆಯುವ ಮೂಲಕ ದರ್ಬೆ ವೃತ್ತದಲ್ಲಿ ಚಾಲನೆ ನೀಡಿದರು.
ಪುತ್ತೂರು ಪೇಟೆಯಾದ್ಯಂತ ಆಮಂತ್ರಣ ಪತ್ರಿಕೆ ವಿತರಿಸಲಾಯಿತು.
ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಶಿವಪ್ರಸಾದ್ ಇಜ್ಜಾವು, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಮಹೇಂದ್ರ ವರ್ಮ ಬಜತ್ತೂರು, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಉಮೇಶ್ ಕೋಡಿಬೈಲು, ಸ್ವಾಗತ ಸಮಿತಿ ಸಂಚಾಲಕರಾದ ಅನಿಲ್ ತೆಂಕಿಲ, ರಾಜು ಶೆಟ್ಟಿ, ಗಣೇಶ್ ಮಕರಂದ, ಪ್ರವೀಣ್ ಶೆಟ್ಟಿ ತಿಂಗಳಾಡಿ, ರವಿಕುಮಾರ್ ರೈ ಕೆದಂಬಾಡಿಮಠ ಸಹಿತ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಆಮಂತ್ರಣ ವಿತರಣೆಯಲ್ಲಿ ಪಾಲ್ಗೊಂಡರು.
ಶಿಕ್ಷಕ ಬಾಲಕೃಷ್ಣ ಪೋರ್ದಾಳ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.