ಭಾರತದ ಮಾಜಿ ಪ್ರಧಾನಿ, ಪ್ರಸಿದ್ಧ ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್ಸಿಗ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಅಲ್ಲದೆ, ಇಂದು (ಡಿಸೆಂಬರ್ 27ರಂದು) ರಜೆ ಘೋಷಿಸಿದೆ

ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಅಧ್ಯಕ್ಷರಾಗಿ, ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ನಾಳೆ ಕರ್ನಾಟಕ ರಾಜ್ಯಾದ್ಯಂತ ಸರ್ಕಾರಿ ರಜೆ (Government Holiday) ಘೋಷಣೆ ಮಾಡಲಾಗಿದೆ. ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ (School-College Holiday) ಇರಲಿದೆ ಎಂದು ಅಧಿಕೃತವಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಪ್ರತಿಕಾ ಪ್ರಕಟಣೆಯಲ್ಲಿ ಘೊಷಿಸಿದ್ದಾರೆ.

ರಾಜ್ಯದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

ಮನಮೋಹನ ಸಿಂಗ್ ಅವರ ನಿಧನದ ಹಿನ್ನಲೆ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದೆ. ಅಲ್ಲದೇ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡೋದಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ. ಇದರ ನಡುವೆ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ನಾಳೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ರದ್ದು ಮಾಡಲಾಗಿದೆ.

7 ದಿನಗಳ ರಾಷ್ಟ್ರೀಯ ಶೋಕಾಚರಣೆ:

ನಾಳೆ ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ಡಾ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ಸೇರಿ ಶ್ರದ್ಧಾಂಜಲಿ ಸಲ್ಲಿಸಲಿದೆ. ಭಾರತ ಸರ್ಕಾರದ ಮೂಲಗಳ ಪ್ರಕಾರ ಡಾ.ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!