ಕಾಸರಗೋಡು: ಇಲ್ಲಿನ ಎರಿಂಜಿಪುಳ ಪಯಸ್ವಿನಿ ನದಿಯಲ್ಲಿ
ಮೂವರು ಬಾಲಕರು ನಾಪತ್ತೆಯಾಗಿದ್ದರು. ಅವರಲ್ಲಿ ಒಬ್ಬ ಬಾಲಕನ ಮೃತದೇಹ ನಿನ್ನೆ ಪತ್ತೆಯಾಗಿತ್ತು. ಇಂದು ಮತ್ತಿಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ.
ಸಿದ್ದೀಕ್ ಅವರ ಪುತ್ರ ರಿಯಾಜ್ (17), ಅಶ್ರಫ್ ಅವರ ಪುತ್ರ ಯಾಸೀನ್ (13) ಮತ್ತು ಮಜೀದ್ ಅವರ ಪುತ್ರ ಸಮದ್ (13) ಮೃತ ಬಾಲಕರು.
ಮಂಜೇಶ್ವರದಲ್ಲಿ ಪ್ಲಸ್ ಒನ್ ಓದುತ್ತಿರುವ ರಿಯಾಝ್ ಶುಕ್ರವಾರ ಎರಿಂಜಿಪುಳ ಬಳಿಯ ತನ್ನ ಅಜ್ಜನ ಮನೆಗೆ ಬಂದಿದ್ದು, ಮೂವರು ಮಕ್ಕಳು ಮಧ್ಯಾಹ್ನ ತಮ್ಮ ಮನೆಯ ಸಮೀಪ ಇರುವ ಪಯಸ್ವಿನಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿದ್ದರು.ಕಾಸರಗೋಡು ಮತ್ತು ಕುಟ್ಟಿಕೋಲ್ ನ ಅಗ್ನಿಶಾಮಕ ಮತ್ತು ಸ್ಕೂಬಾ ತಂಡಗಳ ಶೋಧಕಾರ್ಯದಿಂದ ಮೂವರ ಬಾಲಕರ ಮೃತ ದೇಹ ಪತ್ತೆಯಾಗಿದೆ.ಮೃತದೇಹವನ್ನು ಚೆರ್ಕಳ ಕೆ.ಕೆ.ಪುರಂ ಹೊರವಲಯದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.