ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಗ್ರಾಮಗಳಲ್ಲಿ ಮಹಿಳೆಯರ ಒಳ ಉಡುಪುಗಳೇ ಹೆಚ್ಚು ನಾಪತ್ತೆಯಾಗುತ್ತಿದ್ದವು. ಇದರಿಂದ ಆತಂಕಗೊಂಡ ಗ್ರಾಮದ ಮಹಿಳೆಯೊಬ್ಬರು ಕಳ್ಳನನ್ನು ಪತ್ತೆ ಮಾಡಲು ಮನೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು.
ಆರೋಪಿ ಜಗದೀಶನ ವಿಕೃತಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾತ್ರಿ ವೇಳೆ ಒಂಟಿ ಮನೆಗಳಿಗೆ ನುಗ್ಗುತ್ತಿದ್ದ ಜಗದೀಶ್, ಮಹಿಳೆಯರ ಒಳ ಉಡುಪುಗಳನ್ನು ಹಿಡಿದು ಅಸಭ್ಯವಾಗಿ ವರ್ತಿಸುತ್ತಿದ್ದ ಬಳಿಕ ಬಟ್ಟೆಗಳನ್ನು ಕಳವು ಮಾಡುತ್ತಿದ್ದ.
ಈ ಸಂಬಂಧ ಮಹಿಳೆ ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.














