ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ಚಾಕು ಇರಿದಿರುವ ಆತಂಕಕಾರಿ ಘಟನೆ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ ಗೇಟ್‌ನಲ್ಲಿ ತಡರಾತ್ರಿ ನಡೆದಿದೆ.

ಮನುಕುಮಾರ್ (25) ಪ್ರೇಯಸಿಯಿಂದ ಚಾಕು ಇರಿತಕ್ಕೊಳಗಾದ ಪ್ರಿಯಕರ. ಈತ ಹಾಸನ ತಾಲ್ಲೂಕಿನ ಎ.ಗುಡುಗನಹಳ್ಳಿ ಗ್ರಾಮದ ನಿವಾಸಿ

ಹಾಸನದಲ್ಲಿ ಹಾರ್ಡ್‌ವೇರ್ ಮತ್ತು ಪ್ಲೇವುಡ್ ಅಂಗಡಿ ಇಟ್ಟುಕೊಂಡಿದ್ದಾನೆ. ಮನುಕುಮಾರ್ ಮತ್ತು ಭವಾನಿ ಜೊತೆಯಲ್ಲಿಯೇ ವಿದ್ಯಾಭ್ಯಾಸ ಮಾಡಿದ್ದರು. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಕೆಲ ದಿನಗಳಿಂದ ಇಬ್ಬರು ದೂರವಾಗಿದ್ದರು.

ಹೊಸ ವರ್ಷ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಗೆಂದು ಮನುಕುಮಾರ್ ನಿನ್ನೆ ರಾತ್ರಿ ಸ್ನೇಹಿತರ ಜೊತೆ ಖಾಸಗಿ ಹೋಟೆಲ್‌ಗೆ ಬಂದಿದ್ದರು. ಈ ವೇಳೆ ಆತನಿಗೆ ಭವಾನಿ ಪದೇಪದೆ ಫೋನ್ ಮಾಡುತ್ತಿದ್ದಳು. ಮಧ್ಯರಾತ್ರಿ 12.30ಕ್ಕೆ ಹೋಟೆಲ್ ಬಳಿ ಬಂದ ಭವಾನಿ, ಅಲ್ಲಿಯೇ ಬಿದ್ದಿದ್ದ ಪಾಸ್ ಅನ್ನು ಕೊರಳಿಗೆ ಹಾಕಿಕೊಂಡು ಗೇಟ್ ಒಳಗೆ ಹೋದಳು. ಅಷ್ಟರಲ್ಲಿ ಗೇಟ್ ಬಳಿ ಬಂದ ಮನುಕುಮಾರ್ ಹಾಗೂ ಭವಾನಿ ನಡುವೆ ಜಗಳ ಶುರುವಾಯಿತು.

ಸ್ಥಳದಲ್ಲೇ ಇದ್ದ ಸ್ನೇಹಿತರು ಇಬ್ಬರ ಜಗಳವನ್ನು ಬಿಡಿಸಲು ಪ್ರಯತ್ನಿಸಿದರು. ಈ ವೇಳೆ ಭವಾನಿ ಏಕಾಏಕಿ ಚಾಕುವಿನಿಂದ ಮನುಕುಮಾರ್‌ಗೆ ಇರಿದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಮನುಕುಮಾರ್ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!