
ಪುತ್ತೂರು: ಇಲ್ಲಿನ ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಚುನಾವಣೆಯು ಜ.25ರಂದು ನಿಗದಿಯಾಗಿದ್ದು, ಈ ಹಿನ್ನಲೆಯಲ್ಲಿ ಜ.5, ಆದಿತ್ಯವಾರದಂದು ಸಂಜೆ 3.30 ಕ್ಕೆ ಪಂಜಿಗುಡ್ಡೆ ಈಶ್ವರ ಭಟ್ ಮನೆಯಲ್ಲಿ ಚುನಾವಣೆಯ ಬಗ್ಗೆ ಪೂರ್ವಭಾವಿ ಸಭೆ ನಡೆಯಲಿದೆ.
ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಸದಸ್ಯರೆಲ್ಲರೂ ಸಭೆಯಲ್ಲಿ ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡುವಂತೆ ಈಶ್ವರ್ ಭಟ್ ಪಂಜಿಗುಡ್ಡೆಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.






