
ಪುತ್ತೂರು : ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಅವರು ಜ.4 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಪುತ್ತೂರು ಒಕ್ಕಲಿಗ ಗೌಡ ಸಂಘದ ಕಾರ್ಯಕ್ರಮದ ಹಿನ್ನಲೆಯಲ್ಲಿ ಪುತ್ತೂರಿಗೆ ಭೇಟಿ ನೀಡಿದ ಸ್ವಾಮಿಜೀಯವರು ಮೊದಲು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಮಂಗಳೂರು ಸಂಸ್ಥಾನದ ಧರ್ಮಪಾಲನಾಥ ಸ್ವಾಮಿಜೀ ಜೊತೆಯಾಗಿದ್ದರು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಸ್ವಾಮಿಯವರನ್ನು ಬರಮಾಡಿಕೊಂಡರು






