ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಅವರು ಅವರು ಬೈಲಕುಪ್ಪೆ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಭಾನುವಾರ ಆಗಮಿಸಿದ್ದು, ಶಿಬಿರದಲ್ಲಿ ಒಂದು ತಿಂಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ದಲೈಲಾಮಾ ಅವರು ಬೈಲಕುಪ್ಪೆಯ ಟಿಡಿಎಲ್‌ ಶಾಲಾ ಮೈದಾನಕ್ಕೆ ಭಾನುವಾರ ಮಧ್ಯಾಹ್ನ ಆಗಮಿಸಿದರು.

ಈ ವೇಳೆ ದಲೈ ಲಾಮಾ ಅವರನ್ನು ಮೈಸೂರು ಜಿಲ್ಲಾಡಳಿತ ಮತ್ತು ಶಿಬಿರದ ಪ್ರತಿನಿಧಿಗಳು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದರು. ದಲೈಲಾಮಾ ಅವರು ಶಿಬಿರದಲ್ಲಿರುವ ತಶಿಲೊಂಪೊ ಬೌದ್ಧ ದೇವಾಲಯದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

ಹಿಮಾಚಲ ಪ್ರದೇಶದ ಧರ್ಮಶಾಲಾ ಟಿಬೆಟಿಯನ್ ಕೇಂದ್ರದಲ್ಲಿ ತೀವ್ರ ಶೀತ ವಾತಾವರಣದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯ ಮೇರೆಗೆ ವಿಶ್ರಾಂತಿಗಾಗಿ ಬೈಲಕುಪ್ಪೆಗೆ ಆಗಮಿಸಿರುವುದಾಗಿ ಟಿಬೆಟಿಯನ್ ಶಿಬಿರದ ಪ್ರತಿನಿಧಿ ಜಿಗ್ಮೆ ಸುಲ್ತಾನಿಮ್ ಅವರು ಹೇಳಿದ್ದಾರೆ.

ದಲೈ ಲಾಮಾ ಇತ್ತೀಚೆಗೆ ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದು, ವೈದ್ಯರು ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೈಲಕುಪ್ಪೆಗೆ ಆಗಮಿಸಿದ್ದಾರೆಂದು ತಿಳಿದುಬಂದಿದೆ,

ಎಂಟು ವರ್ಷಗಳಲ್ಲಿ ದಲೈಲಾಮಾ ಅವರು ಬೈಲಕುಪ್ಪೆ ಶಿಬಿರಕ್ಕೆ 26ನೇ ಬಾರಿ ಭೇಟಿ ನೀಡಿದ್ದಾರೆ. ಈ ಬಾರಿಯ ಭೇಟಿಯಲ್ಲಿ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಮೂಲಗಳು ದೃಢಪಡಿಸಿವೆ. ಮೈಸೂರು ಜಿಲ್ಲಾ ಪೊಲೀಸರು ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!