ಕಡಬ :ಪುತ್ತೂರು 9 ವರ್ಷದ ಹಿಂದೆ ಕಡಬ ಠಾಣ ವ್ಯಾಪ್ತಿಯ ಮರ್ದಾಳ ಎಂಬಲ್ಲಿ ಮಹಿಳೆ ಯೋರ್ವರ ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸುತ್ತಿದ್ದ ಆರೋಪಿಯನ್ನು ಪುತ್ತೂರು ನ್ಯಾಯಾಲಯ ದೋಷ ಮುಕ್ತಗೊಳಿಸಿ ಬಿಡುಗಡೆಗೊಳಿಸಿದೆ.

2015ರ ಡಿಸೆಂಬರ್ ತಿಂಗಳಲ್ಲಿ ಕಡಬ ತಾಲೂಕಿನ ಮರ್ದಾಳ ಎಂಬಲ್ಲಿ ಮಹಿಳೆಯೊರ್ವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ಮಹಿಳೆಯ ಮಕ್ಕಳ ಸಮ್ಮುಖದಲ್ಲಿ, ಆಕೆಯ ಮಾನಭಂಗಕ್ಕೆ ಪ್ರಯತ್ನಿಸಿ ಕೊಲ್ಲುದಾಗಿ ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ತದನಂತರ ಈ ಪ್ರಕರಣದ ಆರೋಪಿ ಮೊಹಮ್ಮದ್ ಶರೀಫ್ ಎಂಬತನನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತದನಂತರ ಪೊಲೀಸರು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯು,ತನ್ನ ಮೇಲೆ ಹಲ್ಲೆ ನಡೆಸಿದ ಬಗ್ಗೆ ದೂರುದಾರೆ ಮಹಿಳೆ ಹಾಗೂ ಅವಳ ಸಂಬಂಧಿಕರಾದ ಕೋಲ್ಪೆ ನಿವಾಸಿಗಳ ವಿರುದ್ಧ ತದನಂತರ ದೂರನ್ನು ಕೂಡ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುತ್ತೂರು ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿಗಳಾದ ನ್ಯಾಯಾಲಯದ, ನ್ಯಾಯಾಧೀಶರಾದ  ಯೋಗೀ0ದ್ರ ಶೆಟ್ಟಿ ಯವರು, ಸಾಕ್ಷಿಗಳ ವಿಚಾರಣೆಯನ್ನು ನಡೆಸಿ, ಆರೋಪಿ ವಿರುದ್ಧ ಆರೋಪ ಸಾಬೀತುಪಡಿಸಲು ಅಭಿಯೋಜನ ಪಕ್ಷವು ವಿಫಲವಾದ ಹಿನ್ನೆಲೆಯಲ್ಲಿ, ಆರೋಪಿಯನ್ನು ದೋಷ ಮುಕ್ತಗೊಳಿಸಿ ಬಿಡುಗಡೆಗೆ ಆದೇಶಿಸಿದೆ.

ಈ ಪ್ರಕರಣದಲ್ಲಿ ಆರೋಪಿ ಪರವಾಗಿ ಪುತ್ತೂರಿನ, ‘ಸಾಲ್ಮರ ಲಾ ಚೇಂಬರ್‌’ ನ  ಖ್ಯಾತ  ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಹರೀಶ್ ಕುಮಾರ್ ಎಂ ಮತ್ತು ಸಾತ್ವಿಕ್ ಆರಿಗ ಬಿ ವಾದಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!