ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.

ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ಮೃತ ದೇಹವನ್ನು ಆಂಬ್ಯುಲೆನ್ಸ್ ನಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿ ಪ್ರಸನ್ನ ಕುಮಾರ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!