
ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ.
ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ.
ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹ್ಮಾನ್ ಅವರು ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ






