ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ ಮೆಂಟ್ ನ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ.

ಘಟನೆಗೆ ಸಂಬಂಧಿಸಿದಂತೆ ಕುಟುಂಬದವರು ಆತನ ಮಾಜಿ ಪ್ರೇಯಸಿ ವಿರುದ್ಧ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದರು. ಆತ್ಮಹತ್ಯೆ ಪ್ರಚೋದನೆ ಆರೋಪದಲ್ಲಿ ಯುವತಿಯನ್ನು ಬಂಧಿಸಿದ್ದಾರೆ.

ಯುವತಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಪ್ರಕರಣದಲ್ಲಿ ಯಾವುದೇ ಆತ್ಮಹತ್ಯೆ ಪ್ರಚೋದನೆ ಇಲ್ಲ ಎಂದು ಯುವತಿಗೆ ಜಾಮೀನು ಮಂಜೂರು ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!