ಭಾರೀ ಸದ್ದು ಮಾಡಿದ್ದ ಉಲ್ಲಾಳದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು.

ಇದೀಗ ಮಂಗಳೂರು ಪೊಲೀಸರು ಕಾರ್ಯಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಖುದ್ದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಖಚಿತಪಡಿಸಿದ್ದು, ಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಂಧಿತರು.

ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ್ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಂಧಿತರು. ಇನ್ನು ಬಂಧಿತರಿಂದ ಕಳ್ಳತನಕ್ಕೆ ಬಳಸಿದ್ದ ಫಿಯೆಟ್ ಕಾರು, ಹಣ, ಚಿನ್ನ ತುಂಬಿಕೊಂಡು ಹೋಗಿದ್ದ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಪ್ರಕರಣವನ್ನು ಭೇದಿಸಲು ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆಯು ಸಹಾಯ ಮಾಡಿದೆ.

ದರೋಡೆಕೋರರ ಬಂಧನದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ಮಾಹಿತಿ ನೀಡಿದ್ದು, ತಮಿಳುನಾಡಿನ ವಿವಿಧ ಪ್ರದೇಶದಲ್ಲಿ ಮೂವರು ಆರೋಪಿಗಳ ಬಂಧನವಾಗಿದೆ. ಮುರುಗನ್, ಪ್ರಕಾಶ್ ಅಲಿಯಾಸ್ ಜೈಸ್ವಾ, ಮಣಿವಣ್ಣನ್ ಬಂಧಿತರು. ಬಂಧಿತರಿಂದ 2 ಗೋಣಿಚೀಲ, ತಲ್ವಾರ್‌, 2 ಪಿಸ್ತೂಲ್‌ ಜಪ್ತಿ ಮಾಡಿದ್ದೇವೆ. ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು. ಮುಂಬೈ ಯಿಂದ ಮಾಹಿತಿ ಕಲೆ ಹಾಕಿ ತಮಿಳುನಾಡಿಗೆ ತೆರಳಿ ಬಂಧನ ಮಾಡಿದ್ದು, ಮುರುಗಂಡಿ ದೇವರ್ ಈ ಪ್ರಕರಣದ ಮುಖ್ಯ ಕಿಂಗ್ ಪಿನ್. ಮುರುಗುಂಡಿ ಕಾರನ್ನು ತಿರುವನ್ನಲಿ ತನಕ ಕೊಂಡು ಹೋಗಿದ್ದರು. ಇನ್ನು ಈ ಪ್ರಕರಣ ಬೇಧಿಸಲು ರಾಜ್ಯ ಗುಪ್ತಚರ ಇಲಾಖೆ ಸಹಾಯ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕು ಕೆ.ಸಿ.ರೋಡ್‌ನ ಶಾಖೆಯಲ್ಲಿ ಜನವರಿ 17ರಂದು ಕೋಟೆಕಾರು ಬ್ಯಾಂಕ್ನಲ್ಲಿ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಕಾರು ಬಳಸಿ ಕೋಟೆಕಾರು ಬ್ಯಾಂಕ್ನಲ್ಲಿ ಕೃತ್ಯವೆಸಗಿದ್ದರು. ಬ್ಯಾಂಕ್ ದರೋಡೆ ಬಳಿಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು

ಬಂಧಿತ ಆರೋಪಿಗಳು ತಮಿಳುನಾಡಿನ ತಿರುನೆಲ್ವೇಲಿ ಮೂಲದವರು ಎಂದು ಮಾಹಿತಿ ನೀಡಿದರು.

ಬ್ಯಾಂಕ್ ದರೋಡೆ ಬಳಿಕ ಆರೋಪಿಗಳು ಕೇರಳ ಮೂಲಕ ತಮಿಳುನಾಡಿನ ತಿರುನೆಲ್ವೇಲಿಗೆ ಪರಾರಿ ಆಗಿದ್ದರು. ಬ್ಯಾಂಕ್ ದರೋಡೆಗೆ ಸ್ಥಳೀಯರು ಸಹಾಯ ಮಾಡಿರುವ ಸಾಧ್ಯತೆ ಇದೆ. ಸ್ಥಳೀಯರ ಬೆಂಬಲ ಇಲ್ಲದೆ ಈ ಕೃತ್ಯ ಮಾಡಲು ಸಾಧ್ಯವಿಲ್ಲ. ಬಂಧಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್‌ ತಿಳಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!