ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಸೇರಿ ಜಿಲ್ಲೆಯ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೋಲಾರ, ಬೆಂಗಳೂರು, ಮೈಸೂರು, ತುಮಕೂರು, ಶಿವಮೊಗ್ಗ, ಧಾರವಾಡ, ದಾವಣಗೆರೆ, ರಾಮನಗರ, ಹಾಸನ, ಮಡಿಕೇರಿ, ಕೊಡಗು, ಮಂಡ್ಯ, ಚಾಮರಾಜನಗರದಲ್ಲೂ ಮಳೆ ಆಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಮೋಡ ಕವಿದ ವಾತಾವರಣ ಮತ್ತು ಒಣಹವೆ ಮುಂದುವರೆಯಲಿದೆ. ಬುಧವಾರ ಮತ್ತು ಗುರುವಾರದಿಂದ ರಾಜ್ಯಾದ್ಯಂತ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.