ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬಿಜೆಪಿ ವಾಕ್ತಾರೆ ನಾಜೀಯಾ ಇಲಾಹಿ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಸುಳೇಬಾವಿಯಲ್ಲಿ ಜನವರಿ 19 ರಂದು ನಡೆದ ಹಿಂದೂ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮಾರಿಹಾಳ ಪೊಲೀಸ್ ಠಾಣೆ ಎದುರು ಮುಸ್ಲಿಂ ಸಮುದಾಯದ ಜನರು ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ನಾಜೀಯಾ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.
ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೋಮುಗಲಭೆ ಸೃಷ್ಟಿಗೆ ಪ್ರಚೋದನೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆರೋಪದಡಿ ನಾಜೀಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ.