ವಿಟ್ಲ : ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ, ಈಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು, ನಗದು ವಶಪಡಿಸಿಕೊಂಡಿದ್ದಾರೆ.ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್‌ ಫರ್ನಾಂಡಿಸ್‌ (49 ವ) ಬಂಧಿತ ಆರೋಪಿ

ಜ.3 ರಂದು ರಾತ್ರಿ, ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ, ಉದ್ಯಮಿಯೊಬ್ಬರ ಮನೆಗೆ ಆರು ಜನ ಅಪರಿಚಿತರು ಇಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 02/2025 ರಂತೆ ಪ್ರಕರಣ ದಾಖಲಿಸಿಕೊಂಡು, ಮಾನ್ಯ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್ ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.

ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ ದರೋಡೆಗೆ ಬಳಸಿದ
KL-02-BP-1104ಕಾರು ಕಾರು, 5,00,000/- ರೂ ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ TN-20-DB-5517ನೇ ನಂಬರ ಪ್ಲೇಟ್‌ನ್ನು ವಶಪಡಿಸಿಕೊಂಡಿದ್ದಾರೆ

ಸ್ವಾದೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ- 11,00,000/- ರೂ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿ ಬಾಕಿ ಇರುತ್ತದೆ.

ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಠಾಣೆಗಳಿಂದ, ಅಪರಾಧ ಪ್ರಕರಣಗಳಲ್ಲಿ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!