ಪುತ್ತೂರು: ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಗೆ ಸಂಕಲ್ಪ’ ಧೈಯದಲ್ಲಿ ಸಮಸ್ತ ಕೇಂದ್ರೀಯ ಜಂಇಯ್ಯತುಲ್ ಉಲಮಾದ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್‌ಕೆಎಸ್‌ಎಸ್ ಎಫ್ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಜ.26ರಂದು ಕುಂಬ್ರ ಜಂಕ್ಷನ್‌ನಲ್ಲಿ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಕೆಎಸ್‌ಎಸ್‌ಎಫ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾರಿಸ್ ಕೌಸರಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಅಬ್ರಾಡ್ ಹಾಲ್‌ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡುವ ರ್ಯಾಲಿ 3 ಗಂಟೆಗೆ ಕುಂಬ್ರ ತಲುಪಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಅಧ್ಯಕ್ಷ ಮುಹಮ್ಮದ್ ನವವಿ ವಹಿಸಲಿದ್ದು,ಉದ್ಘಾಟನೆಯನ್ನು ಬಂಬ್ರಾಣ ಉಸ್ತಾದ್ ಅಬ್ದುಲ್ ಖಾದರ್ ಅಲ್ ಖಾಸಮಿ ನಡೆಸಲಿದ್ದಾರೆ.ಸಂಘಟನೆಯ ರಾಜ್ಯ ಕಾರ್ಯದರ್ಶಿ ಅನೀಸ್ ಕೌಸರಿ ಸಂದೇಶ ಭಾಷಣ ಮಾಡಲಿದ್ದಾರೆ.ವಾಗ್ನಿ ನಿಖಿತ್ ರಾಜ್ ಮೌರ್ಯ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕ ಅಶೋಕ್ ಕುಮಾರ್ ರೈ ಸೇರಿ ಪ್ರಮುಖರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಇಸ್ಮಾಯಿಲ್ ಯಮಾನಿ, ಸಂಘಟನಾ ಕಾರ್ಯದರ್ಶಿ ಯಾಸರ್ ಚಿಬಿದ್ರೆ, ಜಿಲ್ಲಾ ಕಾರ್ಯದರ್ಶಿ ಆಶ್ರಫ್ ಮುಕ್ವೆ, ಕುಂಬ್ರ ವಲಯ ಅಧ್ಯಕ್ಷ ಮನ್ಸೂರ್ ಅಸ್ಲಮಿ ಉಪಸ್ಥಿತರಿದ್ದರು.