ಭಾವಿ ವರನೋರ್ವ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾದ ಘಟನೆ ಶುಕ್ರವಾರ ಸಂಜೆ ಮೀಂಜ ಸಮೀಪದ ಬೆಜ್ಜದಲ್ಲಿ ನಡೆದಿದೆ.
ಮೀಂಜ ಸಮೀಪದ ಬೆಜ್ಜದ ಅಜಿತ್ ಕುಮಾರ್ (28) ಮೃತಪಟ್ಟವರು. ಫೆಬ್ರವರಿ ಎರಡರಂದು ವಿವಾಹ ನಿಗದಿಯಾಗಿತ್ತು. ಸಂಜೆ ಮನೆ ಸಮೀಪದ ಮರ ವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ ಯಾಗಿದ್ದಾರೆ.
ಅಜಿತ್ ಕುಮಾರ್ ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ನ ಉಪ್ಪಳ ಶಾಖೆಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಅಜಿತ್ ಗೆ ಹೊಸಂಗಡಿ ಸಮೀಪದ ಯುವತಿ ಜೊತೆ ವಿವಾಹ ನಿಶ್ಚಯ ವಾಗಿತ್ತು.
ಶುಕ್ರವಾರ ಮನೆಯವರು ವಿವಾಹ ಸಾಮಾಗ್ರಿ ಖರೀದಿಸಲು ಪೇಟೆಗೆ ತೆರಳಿದ್ದರು. ಮನೆಯಲ್ಲಿ ಚಿಕ್ಕಪ್ಪ ಮಾತ್ರ ಇದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೃತ್ಯ ಎಸಗಲಾಗಿದೆ. ಸಂಜೆ ಅಜಿತ್ ಮನೆ ಮುಂಭಾಗದ ಮಾವಿನ ಮರದಲ್ಲಿ ಕೇಬಲ್ ವಯರ್ ನಲ್ಲಿ ನೇಣು ಬಿಗಿದಿರುವುದನ್ನು ಮನೆಯವರು ಗಮನಿಸಿದ್ದು ಸ್ಥಳೀಯರು ಅಜಿತ್ ನನ್ನು ಆಸ್ಪತ್ರೆಗೆ ತಲಪಿಸುವಾಗಲೇ ಆಗಲೇ ಮೃತಪಟ್ಟಿದ್ದರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.