ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದಾರೆ ಎಂದು ಜೆಡ್ಡಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ.

X ನಲ್ಲಿ ಪೋಸ್ಟ್ ಮಾಡಿದ ಭಾರತೀಯ ಕಾನ್ಸುಲೇಟ್, ಸೌದಿ ಅರೇಬಿಯಾ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳ ದುರಂತ ನಷ್ಟಕ್ಕೆ ನಾವು ತೀವ್ರ ದುಃಖಿತರಾಗಿದ್ದೇವೆ ಎಂದು ಹೇಳಿದೆ.

ಜೆಡ್ಡಾದ ಭಾರತೀಯ ಕಾನ್ಸುಲೇಟ್ ಜನರಲ್ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ಅಧಿಕಾರಿಗಳು ಮತ್ತು ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮಿಷನ್ ತಿಳಿಸಿದೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ಹೆಚ್ಚಿನ ಪ್ರಶ್ನೆಗಳಿಗೆ ಮೀಸಲಾದ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದೆ.

ಈ ಪೋಸ್ಟ್‌ ಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಪಘಾತ ಮತ್ತು ಜೀವಹಾನಿಯ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ. ಜೆಡ್ಡಾದ ನಮ್ಮ ಕಾನ್ಸುಲ್ ಜನರಲ್ ಜೊತೆ ಮಾತನಾಡಿದ್ದೇನೆ, ಅವರು ಸಂಬಂಧಪಟ್ಟ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ಪರಿಸ್ಥಿತಿಯಲ್ಲಿ ಅವರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!