

ಪ್ರಯಾಗ್ರಾಜ್ನಲ್ಲಿ ಜನವರಿ 13ರಿಂದ ಆರಂಭವಾಗಿರುವ ಮಹಾಕುಂಭ ಮೇಳಕ್ಕೆ (Mahakumbh Mela) ಭಕ್ತ ಸಾಗರವೇ ಹರಿದು ಬರುತ್ತಿದ್ದು, ಪ್ರತಿನಿತ್ಯ ಕೋಟ್ಯಂತರ ಭಕ್ತರು ಪುಣ್ಯಸ್ನಾನ ಮಾಡಿ ಅಲ್ಲಿರುವ ಸಾಧುಗಳಿಂದ ಆಶೀರ್ವಾದ ಪಡೆಯುತ್ತಿದ್ದಾರೆ. ಸದ್ಯ ಕುಂಭಮೇಳಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಧುವೊಬ್ಬರು ಭಕ್ತನಿಗೆ ವಿಶೇಷವಾಗಿ ಆಶೀರ್ವಾದ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ.
ಹಾಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ (Mahakumbh Mela) ಭಕ್ತರೊಬ್ಬರು ನಾಗಾಸಾಧುವಿನ ಬಳಿ ಆಶೀರ್ವಾದ ಪಡೆದಿದ್ದಾರೆ. ಆದರೆ, ಆ ನಾಗಾಸಾಧು ಭಕ್ತನಿಗೆ ಬೇರೆ ರೀತಿಯಾಗಿ ಆಶೀರ್ವಾದ ಮಾಡಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಭಕ್ತರೊಬ್ಬರು ಪುಣ್ಯಸ್ನಾನ ಮಾಡಿದ ಬಳಿಕ ನಾಗಾಸಾಧು ಒಬ್ಬರ ಬಳಿ ಆಶೀರ್ವಾದ ಪಡೆಯಲು ಹೋಗುತ್ತಾರೆ. ಮೊದಲಿಗೆ ಆಶೀರ್ವಾದ ಮಾಡುವ ಸಾಧು ಆ ಬಳಿಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಮಾಡದಂತೆ ಹೇಳಿದ್ದಾರೆ. ಬಳಿಕ ಭಕ್ತನ ತಲೆ ಮೇಲೆ ಜೋರಾಗಿ ಹೊಡೆದಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಅನೇಕರು ಸಾಧುವಿನ ನಡೆಯನ್ನು ಖಂಡಿಸಿದ್ದಾರೆ.
ಈ ಹಿಂದೆ ಇದೇ ನಾಗಾಸಾಧು ಅಸಂಬದ್ಧ ಪ್ರಶ್ನೆಗಳನ್ನು ಕೇಳಿದರೆಂದು ಆರೋಪಿಸಿ ಯೂಟ್ಯೂಬರ್ ಒಬ್ಬರ ಮೇಲೆ ಹಲ್ಲೆ ನಡೆಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ಸಖತ್ ವೈರಲ್ ಆಗಿತ್ತು. ಈ ವಿಚಾರ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿತ್ತು. ಇದೀಗ ಮತ್ತೊಮ್ಮೆ ಬಾಬಾಗೆ ಸಂಬಂಧಿಸಿದ ವಿಡಿಯೋ ಸಖತ್ ವೈರಲ್ ಆಗಿದೆ
