ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಕಾಡುಗೋಡಿಯಲ್ಲಿ ಈ ಘಟನೆ ನಡೆದಿದ್ದು 15 ವರ್ಷದ ಅವಂತಿಕಾ ಚೌರಾಸಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅವಂತಿಕಾ ಚೌರಾಸಿಯಾಗೆ ತಾಯಿ SSLC ಪರೀಕ್ಷೆ ಹತ್ತಿರ ಬರುತ್ತಾ ಇದೆ. ಹೀಗಾಗಿ ಮೊಬೈಲ್ ಬಿಟ್ಟು ಪರೀಕ್ಷೆಗೆ ಓದು ಎಂದು ಬೈದಿದ್ದಾರೆ. ಇದರಿಂದ ದುಡುಕಿದ ಅವಂತಿಕಾ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕಾಡುಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.